ಬೀಡಿನಗುಡ್ಡೆಯಲ್ಲಿ ಕನ್ನಡ ರಾಜ್ಯೋತ್ಸವ
ಬೀಡಿನಗುಡ್ಡೆಯಲ್ಲಿ ಕನ್ನಡ ರಾಜ್ಯೋತ್ಸವ ಉಡುಪಿ, ಅ.27: ಜಿಲ್ಲಾಡಳಿತದ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜೋತ್ಸವ-2017 ಕಾರ್ಯಕ್ರಮ ನವೆಂಬರ್ 1ರಂದು ಬೆಳಗ್ಗೆ 9:00 ಗಂಟೆಗೆ ಬೀಡಿನಗುಡ್ಡೆ ಮಹಾತ್ಮಗಾಂಧಿ ಬಯಲು ಮಂದಿರದಲ್ಲಿ ನಡೆಯಲಿದೆ.
ಬೆಳಗ್ಗೆ 7:45ಕ್ಕೆಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಹಾಗೂ ಬೀಡಿನಗುಡ್ಡೆ ಮಹಾತ್ಮಗಾಂಧಿ ಬಯಲು ಮಂದಿರದವರೆಗೆ ಮೆರವಣಿಗೆ ನಡೆಯಲಿದೆ. ಧ್ವಜಾರೋಹಣ ಹಾಗೂ ಕನ್ನಡ ರಾಜ್ಯೋತ್ಸವ ಸಂದೇಶವನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಹಾಜರಿ ಕಡ್ಡಾಯ: ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳಿಗೆ ನ.1ರಂದು ನಡೆಯುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದ ಸಂದರ್ಭದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಕಡ್ಡಾಯ ಗೊಳಿಸಲಾಗಿದೆ.ಪೂರ್ವಾನುಮತಿ ಪಡೆಯದೇ ಯಾವುದೇ ಅಧಿಕಾರಿ/ಸಿಬ್ಬಂದಿ ಕಾರ್ಯಕ್ರಮಕ್ಕೆ ಗೈರುಹಾಜರಾಗುವಂತಿಲ್ಲ ಎಂದು ಅಪ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.