×
Ad

ಕಾಂಗ್ರೆಸ್ ಸಭೆ: ಮಹಿಳಾ ಘಟಕದ ಬಲವರ್ಧನೆಗೆ ಕರೆ

Update: 2017-10-27 23:52 IST

ಮಡಿಕೇರಿ, ಅ.27: ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ, ಕಾರ್ಯಕರ್ತರ ಸಭೆ ಪಕ್ಷದ ನಗರಾಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಬೆಳ್ಯಪ್ಪಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

ಈ ವೇಳೆ ಸಭೆಯನ್ನುದ್ದೇಶಿ ಮಾತನಾಡಿದ ಪಾರ್ವತಿ, ಮಹಿಳಾ ಘಟಕವನ್ನು ಬಲಗೊಳಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಲಾಗುವುದು ಎಂದರು.

ಸಭೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಝಾಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಪ್ರಧಾನ ಕಾರ್ಯದರ್ಶಿ ಸ್ವರ್ಣಲತಾ, ನಗರಸಭಾ ಸದಸ್ಯ ಪ್ರಕಾಶ್ ಅಚಾರ್ಯ, ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮಾನಾಥ್ ಮತ್ತಿತರರು ಇದ್ದರು.
  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News