ಶಿಕ್ಷಣಾಧಿಕಾರಿಗಳ ವರ್ಗಾವಣೆ
ಬೆಂಗಳೂರು, ಅ.28: ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ 11 ಅಧಿಕಾರಿಗಳನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರ ಹೆಸರುಗಳ ಮುಂದೆ ತೋರಿಸಲಾದ ಹುದ್ದೆ ಮತ್ತು ಸ್ಥಳಗಳಿಗೆ ಮಾರ್ಪಡಿಸಿ, ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಡಯಟ್ ಹಿರಿಯ ಉಪನ್ಯಾಸಕ-ಕೆ.ಆರ್.ಬಿಂಬ, ಶಿವಮೊಗ್ಗ ಜಿಲ್ಲೆಯ ಸರ್ವ ಶಿಕ್ಷಣ ಅಭಿಯಾನದ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ-ಟಿ.ಶಂಕರಪ್ಪ, ಜಮಖಂಡಿ ತಾಲೂಕಿನ ಸಿಟಿಇ ಉಪನ್ಯಾಸಕ-ಕೇಶವ ವಾಮನ ಪೆಟ್ಲೂರು, ಚಾಮರಾಜನಗರ ಜಿಲ್ಲೆಯ ಜಿಲ್ಲಾ ಪಂಚಾಯತ್ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ-ಎಂ.ಉದಯಕುಮಾರ್, ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ-ಜಿ.ಎ.ಲೋಕೇಶ್, ಬೆಂಗಳೂರು ದಕ್ಷಿಣ ಜಿಲ್ಲೆಯ ಉಪ ನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿ-ಜಯಪ್ರಕಾಶ್, ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ-ಕೆ.ಜಿ.ರಘುಚಂದ್ರ, ತಮಕೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ-ಹನುಮಾನಾಯ್ಕ, ವಿಜಯಪುರ ಜಿಲ್ಲೆಯ ಜಿಲ್ಲಾ ಪಂಚಾಯತ್ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ-ಮೊರಟಗಿ ಮಡಿವಾಳಪ್ಪ ಬಸಪ್ಪ, ಗದಗ ಜಿಲ್ಲೆಯ ಉಪ ನಿರ್ದೇಶಕರ ಕಚೇರಿಯ ಡಿವೈಪಿಸಿ, ಆರ್‌ಎಂಎಸ್‌ಎ-ಅಂದಾನಪ್ಪ ಎಂ.ವಡಗೇರಿ ಹಾಗೂ ಮಂಗಳೂರು ಜಿಲ್ಲೆಯ ಸಿಟಿಇ ಉಪನ್ಯಾಸಕ-ಸದಾನಂದ ಪೂಂಜಾರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.