ಗೂಂಡಾ ಕಾಯ್ದೆಯಡಿ ಆರೋಪಿಯ ಬಂಧನ
Update: 2017-10-28 20:15 IST
ಬೆಂಗಳೂರು, ಅ.28: ಇಪ್ಪತ್ತಕ್ಕೂ ಹೆಚ್ಚು ಸರಗಳವು ಸೇರಿ ಸುಮಾರು 83 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ತಬ್ರೇಝ್‌ಖಾನ್ ಎಂಬಾನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಡಿಸಿಪಿ ಡಾ.ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.
ಆರೋಪಿ ತಬ್ರೇಜ್‌ಖಾನ್(33)ನನ್ನು ಇತ್ತೀಚಿಗೆ ಜಯನಗರ ಪೊಲೀಸರು ಬಂಧಿಸಿ 29 ಸರಗಳವು ಪ್ರಕರಣಗಳನ್ನು ಪತ್ತೆಹಚ್ಚಿ 1ಕೆಜಿ 177 ಚಿನ್ನದ ಸರಗಳನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದಾಗ 83 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿತ್ತು ಎಂದು ತಿಳಿದು ಬಂದಿದೆ.
ಆರೋಪಿಯನ್ನು ಈಗಾಗಲೇ ರೌಡಿಪಟ್ಟಿಗೆ ಸೇರಿಸಲಾಗಿದ್ದು, ಹಲವು ಪ್ರಕರಣಗಳಲ್ಲಿ ಬಂಧಿತನಾದರೂ ಮತ್ತೆ ಸರಗಳವು ಇನ್ನಿತರ ಅಪರಾಧ ಕೃತ್ಯಗಳನ್ನು ನಡೆಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.