ವಾಲಿಬಾಲ್ ಪಂದ್ಯಾಟ: ರಾಷ್ಟ್ರ ಮಟ್ಟಕ್ಕೆ ಶೌಕತ್ ಅಲಿ ಆಯ್ಕೆ
Update: 2017-10-29 17:06 IST
ಬಂಟ್ವಾಳ, ಅ. 29: ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ಪಿಯುಸಿ ವಿದ್ಯಾರ್ಥಿ ಶೌಕತ್ ಅಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೈಸೂರಿನ ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದ ಈತ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಈತ ಪ್ರತಿನಿಧಿಸಿದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದೀಗ ತಮ್ಮ ಪ್ರದರ್ಶನಕ್ಕಾಗಿ ಇವರು ರಾಷ್ಟ್ರ ಮಟ್ಟದ ತಂಡದಲ್ಲಿ ಆಡುವ ಅವಕಾಶವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪಾಣೆಮಂಗಳೂರು ಎಸ್‌ಎಲ್‌ಎನ್‌ಪಿ ಹಾಗೂ ತುಂಬೆ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಇವರು ಪಾಣೆಮಂಗಳೂರು ಸಮೀಪದ ನೆಹರುನಗರ ನಿವಾಸಿ ಮುಹಮ್ಮದ್ ಹನೀಫ್ ಹಾಗೂ ಸಬೀನಾ ಬೇಗಂ ದಂಪತಿಯ ಪುತ್ರ.