×
Ad

ಅವಿಭಜಿತ ದಕ ಜಿಲ್ಲೆಗಳ ಜನಪ್ರತಿನಿಧಿಗಳ ಕ್ರೀಡಾಕೂಟ ‘ಹೊಳಪು’

Update: 2017-10-29 20:54 IST

ಕೋಟ, ಅ.29: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕೋಟ ಡಾ.ಶಿವರಾಮ ಕಾರಂತ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಅಂಗವಾಗಿ ಉಡುಪಿ ಹಾಗೂ ದ.ಕ. ಜಿಲ್ಲೆಗಳ ಪಂಚಾಯತ್‌ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ‘ಹೊಳಪು’ ಕಾರ್ಯಕ್ರಮವನ್ನು ರವಿವಾರ ಕೋಟದ ವಿವೇಕ ಹೈಸ್ಕೂ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ಪಂಚಾಯತ್ ಪ್ರತಿನಿಧಿಗಳ ಕ್ರೀಡಾಕೂಟದಲ್ಲಿ ಎಲ್ಲರೂ ಒಟ್ಟಾಗಿ, ಒಂದಾಗಿ ಬೆರೆಯುವುದರಿಂದ ನಮ್ಮ ನಡುವಿನ ಪಕ್ಷ ಭೇದ ಮರೆ ಯಲು ಸಾಧ್ಯ. ಈ ಮೂಲಕ ನಾವೆಲ್ಲರೂ ಒಟ್ಟಾಗಿ ಸ್ನೇಹದಿಂ ಬೆರೆಯಬೇಕು ಎಂದು ಹೇಳಿದರು.

ಕ್ರೀಡಾಕೂಟವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಹಾಗೂ ರಾಜ್ಯ ಸಹಕಾರಿ ಮಾರಾಟ ಮಹಾ ಮಂಡಲದ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಕ್ರೀಡಾ ಧ್ವಜಾರೋಹಣವನ್ನು ಮಾಜಿ ಸಚಿವ ಜಯಪ್ರಕಾಶ್ ನೆರವೇರಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವಳದ ಆಡಳಿತ ಧರ್ಮದರ್ಶಿ ಹರೀಶ್ ಕುಮಾರ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಪಂ ಅಧ್ಯಕ್ಷ ಪ್ರಮೋದ್ ಹಂದೆ ವಹಿಸಿದ್ದರು. ಹಿರಿಯ ಕ್ರೀಡಾಪಟು ಹರೀಶ್ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿದರು

ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಕುಂದಾಪುರ ತಾಪಂ ಅಧಕ್ಷೆ ಜಯಶ್ರೀ ಮೊಗವೀರ, ಜಿಲ್ಲಾ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಕೋಟ ವಿವೇಕ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವುಡ, ನ್ಯಾಯವಾದಿ ಟಿ.ಬಿ. ಶೆಟ್ಟಿ, ಬೆಳಪು ದೇವಿಪ್ರಸಾದ್ ಶೆಟ್ಟಿ, ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ, ತಿಮ್ಮ ಪೂಜಾರಿ, ಜಿಪಂ ಸದಸ್ಯ ರಾಘವೇಂದ್ರ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಷ್ಠಾನದ ಕಾರ್ಯಧ್ಯಕ್ಷ ಆನಂದ್ ಸಿ.ಕುಂದರ್ ಸ್ವಾಗತಿಸಿ ದರು. ಯಡ್ತಾಡಿ ಗ್ರಾಪಂ ಸದಸ್ಯ ಗೌತಮ್ ಹೆಗ್ಡೆ ಕ್ರೀಡಾ ಪ್ರಮಾಣ ವಚನ ಭೋದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಶೆಟ್ಟಿ ವಂದಿಸಿದರು. ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕೋಟ ಗ್ರಾಪಂ ಪ್ರಥಮ
ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾದ ಆಕರ್ಷಕ ಪಥ ಸಂಚಲನದಲ್ಲಿ ಕೋಟ ಗ್ರಾಪಂ ಪ್ರಥಮ, ವಡ್ಡರ್ಸೆ ಗ್ರಾಪಂ ದ್ವಿತೀಯ ಮತ್ತು ಅಲ್ತಾರು ಗ್ರಾಪಂ ತೃತೀಯ ಸ್ಥಾನವನ್ನು ಗೆದ್ದುಕೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News