ನ.15-16: ಕನ್ನಡ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಮಂಗಳೂರು, ಅ.30: ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿಯು ಪ್ರಪ್ರಥಮವಾಗಿ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು ನ.15,16ರಂದು ಮೈಸೂರಿನ ಜೆ.ಎಸ್.ಎಸ್. ಕಾಲೇಜಿನ ಸಹಯೋಗದೊಂದಿಗೆ ಆಯೋಜಿಸಿದೆ.
‘ವಿಜ್ಞಾನ, ತಂತ್ರಜ್ಞಾನ ಮತ್ತು ಸಮಾಜ’ ಎಂಬ ವಿಷಯದ ಮೇಲೆ ನಡೆಯುವ ಈ ಸಮ್ಮೇಳನದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ನಡೆಯಲಿದೆ. ಸುಮಾರು 600 ಪ್ರತಿನಿಧಿಗಳಿಗೆ ಭಾಗವಹಿಸಲು ಅವಕಾಶವಿದ್ದು, ಆಸಕ್ತರು ನ.4ರೊಳಗೆ (kstakannadacon@gmail.com ) ಸಲ್ಲಿಸಬಹುದು. ಮಾಹಿತಿಗೆ ಡಾ.ಎ.ಎಂ. ರಮೇಶ್, ಹಿರಿಯ ವೈಜ್ಞಾನಿಕ ಅಧಿಕಾರಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ (ಮೊ.ಸಂ: 9845258894) ಸಂಪರ್ಕಿಸಬಹುದು.
ಸಮ್ಮೇಳನದಲ್ಲಿ ಖ್ಯಾತ ವಿಜ್ಞಾನ ಲೇಖಕ ಪ್ರೊ.ಜೆ.ಆರ್.ಲಕ್ಷ್ಮಣರಾವ್‌ರಿಗೆ ಅಕಾಡಮಿಯು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಿದೆ ಎಂದು ಪ್ರಕಟನೆ ತಿಳಿಸಿದೆ.