×
Ad

ರಾಷ್ಟ್ರಪತಿ ಹೇಳಿಕೆಗೆ ಪ್ರೊ.ಸಿದ್ದರಾಮಯ್ಯ ಅಭಿನಂದನೆ

Update: 2017-10-31 17:56 IST

ಬೆಂಗಳೂರು, ಅ. 31: 'ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಯಲ್ಲಿ ತೀರ್ಪು ನೀಡಬೇಕೆಂದಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಹೇಳಿಕೆ ದೇಶದ ಬಹುತ್ವದ ಪ್ರಜಾತಂತ್ರ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುತ್ತವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ರಾಷ್ಟ್ರಪತಿಯವರನ್ನು ಅಭಿನಂದಿಸಿದ್ದಾರೆ.

ಇತ್ತೀಚಿಗೆ ಕೇರಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರವರು ಬಡ ಹಾಗೂ ಶೋಷಿತ ಸಮುದಾಯಗಳಿಗೆ ಸಮರ್ಥ ನ್ಯಾಯ ದೊರಕಬೇಕಾದಲ್ಲಿ ನ್ಯಾಯಾಲಯದ ತೀರ್ಪುಗಳನ್ನು ಕಡ್ಡಾಯವಾಗಿ ಸ್ಥಳೀಯ ಭಾಷೆಯಲ್ಲಿಯೂ ನೀಡಬೇಕು ಎಂದಿರುವುದನ್ನು ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಅಲ್ಲದೆ, ಈ ಸಂಬಂಧ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News