×
Ad

ಸಿಎಂರಿಂದ ‘ಪ್ರತಿಜ್ಞಾ ವಿಧಿ’ ಬೋಧನೆ

Update: 2017-10-31 19:51 IST

ಬೆಂಗಳೂರು, ಅ. 31: ಸರ್ದಾರ್ ವಲ್ಲಭಬಾಯ್‌ ಪಟೇಲ್ ಅವರ ಜನ್ಮ ದಿನದ ಅಂಗವಾಗಿ ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಏಕತಾ ದಿವಸದ ‘ಪ್ರತಿಜ್ಞಾ ವಿಧಿ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೋಧಿಸಿದರು.

ಕಾರ್ಯಕ್ರಮದಲ್ಲಿ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ, ವಲ್ಲಭ ಬಾಯ್ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಫೂರ್ತಿಯನ್ನು ಕಾಪಾಡುತ್ತೇನೆ, ರಾಷ್ಟ್ರೀಯ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಲು ನಾನು ನನ್ನದೆ ಆದ ಕೊಡುಗೆಯನ್ನು ನೀಡುತ್ತೇನೆ ಎಂದು ಒಮ್ಮನಸಿನಿಂದ ಪ್ರತಿಜ್ಞೆ ಮಾಡುತ್ತೇನೆಂದು ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಸಿಎಂ ರಾಜಕೀಯ ಸಲಹೆಗಾರ ಗೋವಿಂದರಾಜ್, ಅಪರ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ, ಅಭಿವೃದ್ಧಿ ಆಯುಕ್ತ ವಿಜಯ ಭಾಸ್ಕರ್, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಡಾ.ಎಲ್.ಕೆ.ಅತೀಕ್ ಸೇರಿದಂತೆ ಸಚಿವಾಲಯದ ನೌಕರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News