‘ಕುಮಾರಪರ್ವ’ ಜೆಡಿಎಸ್ ಸಮಾರಂಭ ಮುಂದೂಡಿಕೆ
Update: 2017-10-31 21:42 IST
ಬೆಂಗಳೂರು, ಅ.31: ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಲಿಂಗದೇವರಕೊಪ್ಪಲು ಎದುರು ಇರುವ ಆವರಣದಲ್ಲಿ ನ.3ರಂದು ಬೆಳಗ್ಗೆ 10.30ಕ್ಕೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ವತಿಯಿಂದ ಏರ್ಪಡಿಸಿದ್ದ ‘ಕುಮಾರಪರ್ವ-ಹೊಸ ಮನ್ವಂತರದ ಶುಭಾರಂಭ’ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ.
ಜೆಡಿಎಸ್ ಹಿರಿಯ ಉಪಾಧ್ಯಕ್ಷ, ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಚಿಕ್ಕಮಾದು ಅನಾರೋಗ್ಯದಿಂದ ಬಳಲುತ್ತಿದ್ದು, ಆರೋಗ್ಯದ ಸ್ಥಿತಿ ಗಂಭೀರವಾಗಿರುವುದರಿಂದ ನ.3ರಂದು ಏರ್ಪಡಿಸಿದ್ದ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.