×
Ad

ಚಿಕ್ಕಮಾದುಗೆ ಅಂತಿಮ ನಮನ ಸಲ್ಲಿಸಿದ ಮುಖ್ಯಮಂತ್ರಿ

Update: 2017-11-01 18:11 IST

ಬೆಂಗಳೂರು, ನ.1: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಎಚ್.ಡಿ.ಕೋಟೆಗೆ ಭೇಟಿ ನೀಡಿ ಶಾಸಕ ಚಿಕ್ಕಮಾದು ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಅಲ್ಲದೆ, ಅವರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಆನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಚಿಕ್ಕಮಾದು ಅವರ ಜೊತೆಗಿನ ಒಡನಾಟ ಸ್ಮರಿಸಿಕೊಂಡರು. ಚಿಕ್ಕಮಾದು ಅವರ ನಿಧನ ತಮಗೆ ಭಾರಿ ದುಃಖ ಉಂಟು ಮಾಡಿದೆ. ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ವಿಧಾನಸಭೆ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದ ಅವರು ಜನಪರ ಕಾಳಜಿ ಹೊಂದಿದ್ದರು. ಸಜ್ಜನ ರಾಜಕಾರಣಿ ಎಂದು ಮುಖ್ಯಮಂತ್ರಿಯವರು ಬಣ್ಣಿಸಿದರು.

ಚಿಕ್ಕಮಾದು ಇನ್ನೂ ಬಹಳ ಕಾಲ ರಾಜಕೀಯದಲ್ಲಿ ಇರಬೇಕಿತ್ತು. ಕಳೆದ ವಾರ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದ್ದೆ.ಗುಣಮುಖರಾಗುತ್ತಾರೆ ಎಂಬ ವಿಶ್ವಾಸ ಇತ್ತು. ಆದರೆ, ಅವರ ಅಕಾಲಿಕ ನಿಧನ ನೋವುಂಟು ಮಾಡಿೆ ಎಂದು ಸಿದ್ದರಾಮಯ್ಯ ಹೇಳಿದರು.

ನಾನು ಮತ್ತು ಅವರು ಬೇರೆ ಬೇರೆ ಪಕ್ಷದಲ್ಲಿದ್ದರೂ ವಿಶ್ವಾಸ ಮತ್ತು ಸ್ನೇಹ ಚೆನ್ನಾಗಿತ್ತು. ಅವರು ಬೇರೆ ಪಕ್ಷದವರು ಎಂದು ಯಾವತ್ತೂ ಪರಿಗಣಿಸಿರಲಿಲ್ಲ. ಚಿಕ್ಕಮಾದು ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News