×
Ad

ಕರ್ತವ್ಯ ನಿರತ ಹೆಡ್‍ಕಾನ್ಸ್ ಟೇಬಲ್ ಮೃತ್ಯು

Update: 2017-11-01 18:13 IST

ಚಿಕ್ಕಮಗಳೂರು, ನ.1: ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‍ಟೇಬಲ್ ಓರ್ವರು ಕುಸಿದು ಬಿದ್ದು, ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ನಗರ ಪೊಲೀಸ್ ಠಾಣೆಯ ಹೆಡ್‍ಕಾನ್ಸ್ ಟೇಬಲ್ ಮಲ್ಲಿಕಾರ್ಜುನ ಮಂಗಳವಾರ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಅವರು ಠಾಣೆಯಲ್ಲಿ ಕರ್ತವ್ಯದಲ್ಲಿ ಇರುವಂತೆ ಕುಸಿದು ಬಿದ್ದರು. ತಕ್ಷಣ ಅವರನ್ನು ಸಹೋದ್ಯೋಗಿಗಳಾದ ಹೆಡ್‍ಕಾನ್ಸ್‍ಟೇಬಲ್ ಮಲ್ಲೇಗೌಡ, ವೀರೂಪಾಕ್ಷ, ನಾಗೇಂದ್ರ ಮಹಿಳಾ ಸಿಬ್ಬಂಧಿ ಸುಜಾತ ಎಂಬವರು ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ.ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News