ಆತ್ಮಹತ್ಯೆ
Update: 2017-11-01 19:56 IST
ಕಡಬ, ನ.1: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಐತ್ತೂರು ಗ್ರಾಮದ 72 ಕಾಲನಿ ನಿವಾಸಿ ಪೊನ್ನಯ್ಯ(64) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬಂಟಿಯಾಗಿದ್ದು, ಕೆಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿದ್ದರು. ಇದರಿಂದಾಗಿ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿರಬಹುದೆಂದು ಶಂಕಿಸಲಾಗಿದೆ.
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.