ನ.3ರಂದು ರಾಜ್ಯಾದ್ಯಂತ 24 ಗಂಟೆಗಳ ಕಾಲ 'ತುರ್ತು ಸೇವೆ' ಸಹಿತ ವೈದ್ಯಕೀಯ ಸೇವೆ ಸ್ಥಗಿತ

Update: 2017-11-01 16:11 GMT

ಮಂಗಳೂರು, ನ. 1: ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‌ಮೆಂಟ್ (ಕೆಪಿಎಂಇ) ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ನ. 3ರಂದು ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳು ವೈದ್ಯಕೀಯ ಸೇವೆಯನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸುವುದರಿಂದ ಮಂಗಳೂರಿನಲ್ಲೂ ಖಾಸಗಿ ಆಸ್ಪತ್ರೆಗಳ ತುರ್ತು ವಿಭಾಗದ ಸಹಿತ ವೈದ್ಯಕೀಯ ಸೇವೆಯು ಸ್ಥಗಿತಗೊಳ್ಳಲಿದೆ ಎಂದು ಮಂಗಳೂರು ನರ್ಸಿಂಗ್ ಹೋಮ್ಸ್ ಆ್ಯಂಡ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ಅಸೋಸಿಯೇಶನ್‌ನ ಅಧ್ಯಕ್ಷ ಡಾ. ಯೂಸುಫ್ ಕುಂಬ್ಳೆ ತಿಳಿಸಿದ್ದಾರೆ.

ನ. 3ರ ಬೆಳಗ್ಗೆ 6 ಗಂಟೆಯಿಂದ ಸಂಜೆ ನ. 4ರ ಬೆಳಗ್ಗೆ 6 ಗಂಟೆಯವರೆಗೆ ಖಾಸಗಿ ಆಸ್ಪತ್ರೆಗಳ ತುರ್ತು ವಿಭಾಗದ ಸೇವೆ ಸಹಿತ ವೈದ್ಯಕೀಯ ಸೇವೆಗಳು ಸ್ಥಗಿತಗೊಳ್ಳಲಿದೆ. ಈ 24 ಗಂಟೆಗಳ ಅವಧಿಯಲ್ಲಿ ಯಾವುದೇ ವೈದ್ಯರು ಸೇವೆಗೆ ಲಭ್ಯ ಇರುವುದಿಲ್ಲ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News