ಮಹಿಳಾ ಮೀಸಲಾತಿಗೆ ಆಗ್ರಹಿಸಿ ಮನವಿ
Update: 2017-11-01 21:40 IST
ಉಡುಪಿ, ನ.1: ಸೋನಿಯಾ ಗಾಂಧಿ ಪ್ರತಿಪಾದಿಸಿದ ಮತ್ತು ಬಿಜೆಪಿ ಚುನಾ ವಣಾ ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಿದ ಲೋಕಸಭೆ/ವಿಧಾನಸಭೆಯಲ್ಲಿ ಶೇ.33 ಮಹಿಳಾ ಮೀಸಲಾತಿ ಮಸೂದೆಯನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಮಂಜೂರು ಮಾಡಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಇತ್ತೀಚೆಗೆ ಜಿಲ್ಲಾಧಿಕಾರಿ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿತು.
ಮನವಿಯನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವೆರೋನಿಕಾ ಕರ್ನೇಲಿಯೋ, ಪ್ರಮುಖರಾದ ಸರಳಾ ಕಾಂಚನ್, ಜ್ಯೋತಿ ಹೆಬ್ಬಾರ್, ಚಂದ್ರಿಕಾ ಶೆಟ್ಟಿ, ಗೀತಾ ವಾಗ್ಳೆ, ರೋಶನಿ ಒಲಿವರ್, ಡಾ.ಸುನಿತಾ ಶೆಟ್ಟಿ, ಮೇರಿ ಡಿಸೋಜ, ಐಡಾ ಗಿಬ್ಬಾ ಡಿಸೋಜ, ಸುಲೋಚನಾ, ಅಮ್ಮಣಿ ಮೊದಲಾದವರು ಉಪಸ್ಥಿತರಿದ್ದರು.