ಟೋಲ್ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ
Update: 2017-11-01 22:17 IST
ಮಂಗಳೂರು, ನ. 1: ಹೆದ್ದಾರಿ ನಿಯಮಗಳಿಗೆ ವಿರುದ್ಧವಾಗಿ 10 ಕಿ.ಮೀ. ಅಂತರದಲ್ಲಿ ಸುರತ್ಕಲ್ ಎನ್‌ಐಟಿಕೆ ಹಾಗೂ ಹೆಜಮಾಡಿ ಈ ಎರಡು ಕಡೆ ಅಕ್ರಮವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ. ಜೊತೆಗೆ ಕೂಳೂರು, ಪಣಂಬೂರು, ಬೈಕಂಪಾಡಿ, ಸುರತ್ಕಲ್ ಭಾಗದ ಹೆದ್ದಾರಿ ರಸ್ತೆಯು ಹೊಂಡ ಗುಂಡಿಗಳಿಂದ ತುಂಬಿಹೋಗಿದ್ದು, ಮಾರಣಾಂತಿಕವಾಗಿ ಪರಿಣಮಿಸಿವೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಅಕ್ರಮ ಟೋಲ್ ಸಂಗ್ರಹ ನಿಲುಗಡೆಗೆ ಆಗ್ರಹಿಸಿ, ಹೆದ್ದಾರಿ ಗುಂಡಿಗಳನ್ನು ಮುಚ್ಚಿ ಕೂಡಲೇ ದುರಸ್ಥಿಗೆ ಮುಂದಾಗಬೇಕು ಎಂದು ಒತ್ತಾಯಿಸಿ ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ವತಿಯಿಂದ ನ.2ರಂದು ಬೆಳಗ್ಗೆ 11 ಗಂಟೆಗೆ ನಂತೂರಿನ ಹೆದ್ದಾರಿ ಪ್ರಾಧಿಕಾರ ಕಚೇರಿ ಎದುರು ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.