×
Ad

ನ. 4ರಂದು ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ

Update: 2017-11-01 22:28 IST

ಮಂಗಳೂರು, ನ.1: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.4ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಡುವ ಮುಖ್ಯಮಂತ್ರಿ ಅವರು 9:50ಕ್ಕೆ ಬಜ್ಪೆ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಬಳಿಕ ಬೆಳಗ್ಗೆ 10:30ಕ್ಕೆ ನಗರದ ನೆಹರೂ ಮೈದಾನದಲ್ಲಿ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ, ಮಂಗಳೂರು ಜೋಜೊ ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಸ್ಪರ್ಧೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 11:30ಕ್ಕೆ ಬಜ್ಪೆ ವಿಮಾನ ನಿಲ್ದಾಣದಿಂದ ಶ್ರವಣ ಬೆಳಗೊಳಕ್ಕೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News