×
Ad

ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳಲು ಪಾಕ್‌ಗೆ ಅವಕಾಶ: ಟಿಲರ್‌ಸನ್

Update: 2017-11-01 22:44 IST

ವಾಶಿಂಗ್ಟನ್, ನ. 1: ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕ ಗುಂಪುಗಳ ಬಗ್ಗೆ ಅಮೆರಿಕ ನೀಡುವ ಮಾಹಿತಿಯ ಆಧಾರದಲ್ಲಿ ಕ್ರಮ ತೆಗೆದುಕೊಳ್ಳಲು ಪಾಕಿಸ್ತಾನಕ್ಕೆ ಅವಕಾಶವೊಂದನ್ನು ನೀಡುವುದಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರೆಕ್ಸ್ ಟಿಲರ್‌ಸನ್ ಹೇಳಿದ್ದಾರೆ.

 ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ನೂತನ ದಕ್ಷಿಣ ಏಶ್ಯ ಮತ್ತು ಅಫ್ಘಾನ್ ನೀತಿಯ ಭಾಗವಾಗಿ, ಭಯೋತ್ಪಾದಕ ಗುಂಪುಗಳ ವಿರುದ್ಧ ನಿಗ್ರಹ ಕಾರ್ಯಾಚರಣೆ ನಡೆಸುವಂತೆ ಅಮೆರಿಕ ಪಾಕಿಸ್ತಾನದ ಮೇಲೆ ಹೆಚ್ಚಿನ ಒತ್ತಡ ಹೇರಿದೆ.

ಕಳೆದ ತಿಂಗಳು ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದ ಟಿಲರ್‌ಸನ್, ಭಯೋತ್ಪಾದಕರ ದಮನ ಕಾರ್ಯಾಚರಣೆಯನ್ನು ಹೆಚ್ಚಿಸುವಂತೆ ಪಾಕಿಸ್ತಾನದ ನಾಗರಿಕ ಮತ್ತು ಸೇನಾ ನಾಯಕತ್ವಕ್ಕೆ ಸೂಚಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News