×
Ad

ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

Update: 2017-11-02 18:27 IST

ಕಲಬುರ್ಗಿ, ನ. 2:  ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದ ಮೇಲೆ ಶ್ರೀರಾಮಸೇನೆಯ ರಾಜ್ಯ ಗೌರವಾಧ್ಯಕ್ಷ, ಆಂದೋಲಾ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ಬಂಧನ ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೇರಿ ಪ್ರಮುಖ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಲಬುರ್ಗಿಯ ಪಟೇಲ್ ವತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಶ್ರೀರಾಮ ಸೇನಾ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಕನ್ನಡ ಭವನದಲ್ಲಿ ಕಾರ್ಯಕರ್ತರೊಂದಿಗೆ ಚರ್ಚಿಸುವಾಗ ಕಲಬುರಗಿ ಉಪ ವಿಭಾಗದ ಎಎಸ್ಪಿ ಲೋಕೇಶ್ ತಂಡ, ಮುತಾಲಿಕ್ ಅವರನ್ನು ತಮ್ಮ ವಶಕ್ಕೆ ಪಡೆದಿದ್ದೇವೆ. ನಂತರ ಬೇರೆಡೆ ಅವರನ್ನು ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಆಂದೋಲಾ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿಯನ್ನು ಬಂಧಿಸುವ ಮೂಲಕ ಹಿಂದುತ್ವವನ್ನು ದಮನ ಮಾಡಲು ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಜೇವರ್ಗಿ ಶಾಸಕ ಅಜಯಸಿಂಗ್ ಹುನ್ನಾರ ನಡೆಸಿದ್ದಾರೆ. ಅವರ ಕುಮ್ಮಕ್ಕಿನಿಂದ ಆಂದೋಲಾ ಶ್ರೀಯನ್ನು ಬಂಧಿಸಲಾಗಿದೆ ಎಂದು ಮುತಾಲಿಕ್ ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News