ನ. 5ರಂದು ಬಿ.ಸಿ.ರೋಡಿನಲ್ಲಿ ಉಚಿತ ಹಿಜಾಮ ಚಿಕಿತ್ಸಾ ಶಿಬಿರ
ಬಂಟ್ವಾಳ, ನ. 2: ಜವಾನ್ ಫ್ರೆಂಡ್ಸ್ ಬಿ.ಸಿ.ರೋಡ್ ಹಾಗೂ ಯು.ಟಿ.ಖಾದರ್ ಅಭಿಮಾನಿಗಳ ಬಳಗ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾಸ್ಪತ್ರೆ ಇದರ ಸಹಯೋಗದೊಂದಿಗೆ ನ. 5ರಂದು ಉಚಿತ ಹಿಜಾಮ ಚಿಕಿತ್ಸಾ ಶಿಬಿರ ಬಿ.ಸಿ.ರೋಡಿನ ಕೊಡಂಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಜವಾನ್ ಫ್ರೆಂಡ್ಸ್‌ನ ಅಧ್ಯಕ್ಷ ರಿಯಾಝ್ ಜವಾನ್ ಹೇಳಿದ್ದಾರೆ.
ಅರಣ್ಯ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮದ ಉದ್ಘಾಟನೆ ಮಾಡುವರು. ಆಹಾರ ಸಚಿವ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸುವರು. ಮಿತ್ತಬೈಲು ಜುಮಾ ಮಸೀದಿ ಖತೀಬ್ ಎಂ.ವೈ.ಅಶ್ರಫ್ ಫೈಝಿ ದುವಾ ನೆರವೇರಿಸುವರು. ವೆನ್ಲಾಕ್ ಜಿಲ್ಲಾಸ್ಪತ್ರೆಯ ಯುನಾನಿ ವೈದ್ಯ ಡಾ. ಸೈಯದ್ ಜಾಹಿದ್ ಹುಸೈನ್ ಹಿಜಾಮ ಶಿಬಿರ ನಡೆಸುವರು ಎಂದು ಹೇಳಿದರು.
ಗೇರು ಅಭಿವೃಧ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ರಾಜ್ಯ ಆಹಾರ ಆಯೋಗದ ಸದಸ್ಯ ಬಿ.ಎ. ಮಹಮ್ಮದಾಲಿ ಕಮ್ಮರಡಿ, ಹಜ್ ಸಮಿತಿ ಸದಸ್ಯ ಕೆ.ಎಂ.ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಬಂಟ್ವಾಳ ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬೂಡಾ ಅಧ್ಯಕ್ಷ ಸದಾಶಿವ ಬಂಗೇರ ಮತ್ತಿತರರು ಮುಖ್ಯ ಅಥಿತಿಗಳಾಗಿ ಭಾಗವಹಿಸುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಯು.ಟಿ.ಖಾದರ್ ಆಭಿಮಾನಿಗಳ ಬಳಗದ ಅಧ್ಯಕ್ಷ ಆಶಿಕ್ ಕುಕ್ಕಾಜೆ, ಜವಾನ್ ಫ್ರೆಂಡ್ಸ್‌ನ ಸದಸ್ಯ ಸತ್ತಾರ್ ನಂದರಬೆಟ್ಟು, ಸಮದ್ ಕೈಕಂಬ, ಯೂನುಸ್ ನೌಫಲ್ ಬಂಟ್ವಾಳ ಉಪಸ್ಥಿತರಿದ್ದರು.