×
Ad

ಮಟ್ಕಾ ದಂಧೆ : 6 ಮಂದಿಯ ಸೆರೆ

Update: 2017-11-02 19:58 IST

ಮಂಗಳೂರು, ನ. 2: ನಗರದ ಸರ್ವಿಸ್ ಬಸ್ ನಿಲ್ದಾಣ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದ 6 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್ ಸರ್ವಿಸ್ ಬಸ್ ನಿಲ್ದಾಣ ಬಳಿಯ ಒಣಮೀನು ಮಾರುಕಟ್ಟೆಯ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆಯನ್ನು ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಟ್ಕಾ ದಂಧೆಯಲ್ಲಿ ನಿರತರಾಗಿದ್ದ ಬಜಾಲ್ ಚರ್ಚ್ ರಸ್ತೆಯ ರಾಕೇಶ್ ಪೂಜಾರಿ (32), ಸ್ಟೇಟ್ ಬ್ಯಾಂಕ್ ಬಳಿಯ ಮಿಶನ್ ಕಂಪೌಂಡ್ ನಿವಾಸಿ ದಯಾನಂದ (44), ಗೋರಿಗುಡ್ಡೆ ವಿ.ಎಸ್.ಪಂಡಿತ್ ಕಂಪೌಂಡ್ ಅಶೋಕ್ (44), ಅನುಪಮ್ ಕಾಂಪೌಂಡ್‌ನ ಉಜ್ಜೋಡಿ ನಂದನ್ ಸಾಲ್ಯಾನ್ (28), ಜೆಪ್ಪು ಬಪ್ಪಾಲ್‌ನ ಮುಹಮ್ಮದ್ ಯಾಸಿನ್ (21), ಅಡ್ಡೂರು ಬದ್ರಿಯಾ ಜುಮಾ ಮಸೀದಿ ರಸ್ತೆಯ ಇಮ್ತಿಯಾಝ್ ಅಹ್ಮದ್ (44) ಎಂಬವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಮಟ್ಕಾ ಆಟಕ್ಕೆ ಬಳಸಿದ 17,970 ರೂ. ನಗದು, ಮಟ್ಕಾ ನಂಬ್ರ ಬರೆದ ಚೀಟಿಗಳು, 7 ಮೊಬೈಲ್ ಫೋನ್‌ಗಳು ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 56,770 ರೂ. ಆಗಿದೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಕಮೀಷನರ್ ಟಿ. ಆರ್.ಸುರೇಶ್ ಅವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಹನುಮಂತರಾಯ ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ. ಉಮಾ ಪ್ರಶಾಂಶ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News