ಟಿಪ್ಪು ಜಯಂತಿ ಆಚರಣೆ ರದ್ದು ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ
ಬೆಂಗಳೂರು, ನ.2: ರಾಜ್ಯಾದ್ಯಂತ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಹೊರಡಿಸಿರುವ ಅಧಿಸೂಚನೆ ರದ್ದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಕೊಡಗಿನ ಮಂಜುನಾಥ್ ಚಿನ್ನಪ್ಪ ಎಂಬುವವರಿಂದ ಪಿಐಎಲ್ ಸಲ್ಲಿಕೆಯಾಗಿದ್ದು, ಶುಕ್ರವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಟಿಪ್ಪು ಸುಲ್ತಾನ್ ಸ್ವಾತಂತ್ರ ಹೋರಾಟಗಾರನಲ್ಲ. ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಿಂದ ಜನರ ಭಾವನೆಗಳಿಗೆ ಧಕ್ಕೆ ಬರುತ್ತದೆ. ಕಳೆದ ಬಾರಿಯೂ ಕೋಮುಗಲಭೆಗಳಾಗಿವೆ. ಹೀಗಾಗಿ, ಸರಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದಾರೆ.
ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಕಾರ್ಯದರ್ಶಿ, ಕೊಡಗಿನ ಜಿಲ್ಲಾಧಿಕಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಮಾಲು ಅರ್ಜಿಯಲ್ಲಿ ಕೋರಿದ್ದಾರೆ.
ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಿಸುವಂತೆ ಸರಕಾರ ಆದೇಶಿಸಿತ್ತು. ಹೀಗಾಗಿ, ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶುಕ್ರವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.