×
Ad

ಅರ್ಜಿ ವಿಚಾರಣೆ ಮತ್ತೊಂದು ಪೀಠಕ್ಕೆ ವರ್ಗಾಯಿಸಿದ ಹಂಗಾಮಿ ಸಿಜೆ ಹೈಕೋರ್ಟ್ ವಿಭಾಗೀಯ ಪೀಠ

Update: 2017-11-02 21:26 IST

ಬೆಂಗಳೂರು, ನ.2: ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆಗಳ ಭರ್ತಿ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ನೇತೃತ್ವದ ವಿಭಾಗೀಯ ಪೀಠ ಬೇರೊಂದು ನ್ಯಾಯಪೀಠಕ್ಕೆ ವರ್ಗಾಯಿಸಿದೆ.

ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲ ಗೌಡ ಹಾಗೂ ವಕೀಲರಾದ ಎಸ್.ಬಸವರಾಜು ಮತ್ತು ಬಿ.ಎಂ.ಅರುಣ್ ಸಲ್ಲಿಸಿದ್ದ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ಪೀಠದ ಮುಂದೆ ಗುರುವಾರ ವಿಚಾರಣೆಗೆ ನಿಗದಿಯಾಗಿತ್ತು.

ಈ ವೇಳೆ, ಅರ್ಜಿಯಲ್ಲಿ ಕರ್ನಾಟಕ ಹೈಕೋರ್ಟ್ ಪ್ರತಿವಾದಿಯಾಗಿರುವುದನ್ನು ಗಮನಿಸಿದ ನ್ಯಾಯಪೀಠ, ಈ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡಿರದ ಪೀಠದಲ್ಲಿ ವಿಚಾರಣೆಗೆ ನಿಗದಿಯಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.

ಹೈಕೋರ್ಟ್‌ನಲ್ಲಿ ಖಾಲಿಯಿರುವ 37 ನ್ಯಾಯಮೂರ್ತಿಗಳ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವಂತೆ ಕೇಂದ್ರ ಸರಕಾರ ಹಾಗೂ ಸುಪ್ರೀಂ ಕೊರ್ಟ್ ನಿರ್ದೇಶನ ನೀಡುವಂತೆ ಕೋರಿ ಪಿಐಎಲ್ ಸಲ್ಲಿಸಲಾಗಿದ್ದು, ಅರ್ಜಿಯಲ್ಲಿ ಕೇಂದ್ರ ಹಾಗೂ ರಾಜ್ಯಸರಕಾರ, ಸುಪ್ರೀಂ ಕೋರ್ಟ್ ಹಾಗೂ ರಾಜ್ಯ ಹೈಕೋರ್ಟ್‌ಗಳನ್ನು ಪ್ರತಿವಾದಿಯನ್ನಾಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News