×
Ad

ಸಂಬಂಧಿಕರೊಬ್ಬರ ನಿಧನದಿಂದ ಪರಿವರ್ತನಾ ರ್ಯಾಲಿಗೆ ಹೋಗಿಲ್ಲ: ಶ್ರೀನಿವಾಸ್ ಪ್ರಸಾದ್

Update: 2017-11-02 21:45 IST

ಮೈಸೂರು,ನ.2:  ಬಿಜೆಪಿ ಪರಿವರ್ತನಾ ರ್ಯಾಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮನ್ನು ಆಹ್ವಾನಿಸಿದ್ದರು. ನಮ್ಮ ಸಂಬಂಧಿಕರೊಬ್ಬರು ನಿಧನರಾದ ಹಿನ್ನಲೆಯಲ್ಲಿ ಈ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಲಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ತಿಳಿಸಿದರು.

ವಾರ್ತಾಭಾರತಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ನಾನು ಕಾರ್ಯಕ್ರಮಕ್ಕೆ ಹೋಗದಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿರುವುದು ನಿಜ. ನನ್ನ ಕ್ಷೇತ್ರದಿಂದ ಹಲವಾರು ಕಾರ್ಯಕರ್ತರನ್ನು ಕಳುಹಿಸಿಕೊಟ್ಟಿದ್ದೇನೆ. ನನಗೆ ಪಕ್ಷದ ನಾಯಕರ ಮೇಲೆ ಅಸಮಾಧಾನವಿಲ್ಲ, ಕೆಲವು ಮಾಧ್ಯಮಗಳು ಈ ರೀತಿಯ ಸುದ್ಧಿಯನ್ನು ಬಿತ್ತರಿಸುತ್ತಿದ್ದಾರೆ. ಇದಕ್ಕೆಲ್ಲ ಆದಷ್ಟು ಬೇಗ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News