ಕನ್ನಡ ಪುಸ್ತಕ ಸೊಗಸು-2016 ಬಹುಮಾನ

Update: 2017-11-02 16:16 GMT

ಉಡುಪಿ, ನ.2: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2016ರ ಜನವರಿ ತಿಂಗಳಿನಿಂದ ಡಿಸೆಂಬರ್‌ವರೆಗೆ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ಕಲಾವಿದರು, ಲೇಖಕರು, ಪ್ರಕಾಶಕರಿಗೆ ಕನ್ನಡ ಪುಸ್ತಕ ಸೊಗಸು-2016 ಬಹುಮಾನಗಳನ್ನು ನೀಡಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು, ಕಲಾವಿದರು, ಲೇಖಕರು ಸ್ವಯಂ ಅರ್ಜಿ ಸಲ್ಲಿಸ ಬಹುದು.ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸವನ್ನು ನ.20ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವೆಬ್‌ಸೈಟ್ -www.kannadapustakapradhikara.com- ಅಥವಾದೂರವಾಣಿ ಸಂಖ್ಯೆ: 08022484516 /22107704ನ್ನು ಸಂಪರ್ಕಿಸುವಂತೆ ಪ್ರಾಧಿಕಾರದ ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News