×
Ad

ಪತ್ರಕರ್ತನ ಮೇಲೆ ಸುಳ್ಳು ಪ್ರಕರಣ: ಆರೋಪ

Update: 2017-11-02 22:29 IST

ಸಿದ್ದಾಪುರ (ಕೊಡಗು), ನ.2: ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಪ್ರದೇಶದಲ್ಲಿರುವ ಕಾವೇರಿ ನದಿ ದಂಡೆಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣೆ ಪ್ರಕರಣ ಬಯಲಿಗೆಳೆಯಲು ತೆರಳಿದ್ದ ಪತ್ರಕರ್ತರ ಮೇಲೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಪತ್ರಕರ್ತರು ಆರೋಪಿಸಿದ್ದಾರೆ.

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಸೈ ಮಹೇಶ್ ದಂಧೆ ಕೊರರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಸುದ್ದಿ ಮಾಡಲು ತೆರಳಿದ್ದ ಪತ್ರಕರ್ತರ ವಿರುದ್ಧವೇ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ದೂರಿರುವ ಪತ್ರಕರ್ತರು, ಪೊಲೀಸ್ ಅಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಘಟನೆ ನಡೆಯುವಾಗ ತಮಿಳುನಾಡಿನಲ್ಲಿದ್ದ ನನ್ನ ಮೇಲೆಯೂ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಐಪಿಸಿ 384 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ ಎಂದು ಪತ್ರಕರ್ತ ಶಂಸುದ್ದೀನ್ ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News