ಚಾಮರಾಜನಗರ: ನ. 6ರಂದು ಕನಕದಾಸ ಜಯಂತಿ ಆಚರಣೆ
ಚಾಮರಾಜನಗರ, ನ.3: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 6ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 9.30ಕ್ಕೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಲಿದ್ದು,
ಬೆಳಗ್ಗೆ 11ಕ್ಕೆ ಹಳೆ ಖಾಸಗಿ ಬಸ್ ನಿಲ್ದಾಣದ ಮಾರಿಗುಡಿ ದೇವಸ್ಥಾನದ ಆವರಣದ ಬಳಿ ನಡೆಯಲಿರುವ ಸಮಾವೇಶ ಕಾರ್ಯಕ್ರಮವನ್ನು ಸಕ್ಕರೆ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಗೀತಾ ಮಹದೇವಪ್ರಸಾದ್ ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಭಕ್ತ ಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಆರ್. ಉಮೇಶ್, ಕಾಡಾ ಅಧ್ಯಕ್ಷ ಎಚ್.ಎಸ್. ನಂಜಪ್ಪ, ನಗರಸಭೆಯ ಅಧ್ಯಕ್ಷ ಶೋಭ, ತಾಲೂಕು ಪಂಚಾಯತ್ ಅಧ್ಯಕ್ಷ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುಹೈಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಇದೇ ಸಂದರ್ಭ ಗುಂಡ್ಲುಪೇಟೆ ವಿಶ್ರಾಂತ ಪ್ರಾಂಶುಪಾಲರಾದ ಕೆಂಪರಾಜು ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.