ಬಿಜೆಪಿ ಸೇರಿದ ಮುಕುಲ್ ರಾಯ್
Update: 2017-11-03 19:42 IST
ಹೊಸದಿಲ್ಲಿ, ನ.3: ತೃಣಮೂಲ ಕಾಂಗ್ರೆಸ್ ನ ಮಾಜಿ ನಾಯಕ ಮುಕುಲ್ ರಾಯ್ ಶುಕ್ರವಾರ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹಾಗು ಪಕ್ಷದ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
“ಬಿಜೆಪಿ ಇಲ್ಲದಿದ್ದರೆ ತೃಣಮೂಲ ಕಾಂಗ್ರೆಸ್ ಅಸ್ತಿತ್ವದಲ್ಲೇ ಇರುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಲಿದೆ” ಎಂದು ರಾಯ್ ಹೇಳಿದರು.
ಈ ಸಂದರ್ಭ ಮಾತನಾಡಿದ ರವಿಶಂಕರ್ ಪ್ರಸಾದ್ ಮುಕುಲ್ ರಾಯ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಉತ್ತಮ ಕೆಲಸಗಳನ್ನು ಮಾಡಲಿದೆ ಎಂದರು.