ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯಾಗಾರ

Update: 2017-11-04 08:21 GMT

ಮೂಡುಬಿದಿರೆ, ನ.4: ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಫೋರಮ್ ಸದಸ್ಯರು "ವರ್ಚುಯಲ್  ರಿಯಾಲಿಟಿ" ವಿಷಯದ ಕುರಿತು ಕಾರ್ಯಾಗಾರ ಆಯೋಜಿಸಿದ್ದರು.

ಬೆಂಗಳೂರಿನ ಮೊಝಿಲ್ಲಾ ಸಂಸ್ಥೆಯ ಪ್ರತಿನಿಧಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಪಠ್ಯೇತರ ಚಟುವಟಿಕೆಗಳ ಮಹತ್ವದ ಕುರಿತು ವಿವರಿಸಿದರು.

ಮೊಝಿಲ್ಲಾ ಸಂಸ್ಥೆಯ ರಿತು ಜಸವೆ ಅವರು ಎಚ್.ಟಿ.ಎಂ.ಎಲ್., ಸಿ.ಎಸ್.ಎಸ್., ಜಾವಾ ಸ್ಕ್ರಿಪ್ಟ್ ವಿಷಯಗಳ ಕುರಿತು ಮಾಹಿತಿ ಒದಗಿಸಿದರು .

ಓಪನ್ ಸೊರ್ಸ್ ಮತ್ತು ಇಂಟರ್ನ್ಶಿಪ್ ಅವಕಾಶಗಳ ಬಗ್ಗೆಯೂ ಮಾಹಿತಿ ನೀಡಲಾಯಿತು. ಒಂದು ದಿನದ ಈ ಕಾರ್ಯಾಗಾರದಲ್ಲಿ ವಿಭಾಗ ಮುಖ್ಯಸ್ಥ ಪ್ರೊ. ಮಂಜುನಾಥ ಕೊಟ್ಟಾರಿ ಮತ್ತು ಇತರ ಪ್ರಾಧ್ಯಾಪಕರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News