ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
Update: 2017-11-04 17:29 IST
ಬಾಗೇಪಲ್ಲಿ, ನ.4: ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಬೀಕ್ ಸವಾರ ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಪೆನುಗೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ರಾ.ಹೆ.7ರ ಪಾಲಸಮುದ್ರಂ ಬಳಿ ನಡೆದಿದೆ.
ಬಾಗೇಪಲ್ಲಿ ತಾಲೂಕಿನ ಸಿಪಿಐ(ಎಂ) ಯುವ ಮುಖಂಡ ಶ್ರೀನಿವಾಸರೆಡ್ಡಿ ಮೃತಪಟ್ಟವರೆಂದು ಗುರುತಿಸಲಾಗಿದೆ.
ಶ್ರೀನಿವಾಸರೆಡ್ಡಿ ಅವರು ಆಂಧ್ರ ಪ್ರದೇಶದ ಅನಂತಪುರದಿಂದ ಗುರುವಾರ ರಾತ್ರಿ ಬಾಗೇಪಲ್ಲಿಗೆ ಬರುವ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಆಂಧ್ರ ಪ್ರದೇಶದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತ ಶ್ರೀನಿವಾಸರೆಡ್ಡಿ ಮೃತ ದೇಹವನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ನಂತರ ಮೃತದೇಹವನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.