×
Ad

ನ. 8ರಂದು ಅಸೈಗೋಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೆಣುಗೋಪಾಲ್

Update: 2017-11-04 20:51 IST

ಉಳ್ಳಾಲ, ನ. 4: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಲ್ ನ. 8ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ವಿಧಾನ ಸಭಾ ಕ್ಷೇತ್ರದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕೊಣಾಜೆ ಗ್ರಾಮದ ಅಸೈಗೋಳಿ ವಾರ್ಡಿನ 110ನೇ ಬೂತ್‌ಗೆ ಭೇಟಿ ನೀಡಲಿದ್ದು ‘ಮನೆಮನೆಗೆ ಕಾಂಗ್ರೆಸ್’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹೇಳಿದರು.

ತೊಕ್ಕೊಟ್ಟಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ವೇಣುಗೋಪಾಲ್ ಅವರು ಕಾರ್ಯಕಕರ್ತರ ಜೊತೆ ಸಮಾಲೋಚನೆ ನಡೆಸುವರು. ಕ್ಷೇತ್ರದ ಶಾಸಕರು, ಆಹಾರ ಸಚಿವ ಯು.ಟಿ.ಖಾದರ್ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಲಿದ್ದು ಪಕ್ಷದ ಕಾರ್ಯಕರ್ತರು, ವಿವಿಧ ಸಮಿತಿಯ ಪದಾಧಿಕಾರಿಗಳು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

 ಉಸ್ತುವಾರಿ ವೇಣುಗೋಪಾಲ್ ಅವರು ಅಸೈಗೋಳಿಯ ಕಾರ್ಯಕ್ರಮದ ಬಳಿಕ ನಗರದ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಸದನದಲ್ಲಿ ನಡೆಯುವ ಬೂತ್ ಸಮಿತಿ ಹಾಗೂ ಸಮಿತಿ ಆಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರ ಸಭೆಯಲ್ಲಿ ಭಾಗವಹಿಸುವರು. ಈ ಸಭೆಯಲ್ಲಿ ಉಳ್ಳಾಲ ಬ್ಲಾಕ್ ಸಂಬಮಸಿದ ಸದಸ್ಯರು ಹಾಜರಾಗಬೇಕು ಎಂದು ವಿನಂತಿಸಿದರು. ಹಾಗೆಯೇ 2016ರ ನ. 8ರಂದು ನೋಟ್ ಬ್ಯಾನ್ ಮಾಡಿದ ಕೇಂದ್ರ ಸರಕಾರದ ಕ್ರಮದ ವಿರುದ್ಧ ಬೆಳಗ್ಗೆ 10.00ರಿಂದ 12.00ರ ತನಕ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಕರಾಳ ದಿನ ಆಚರಣೆ, ಪ್ರತಿಭಟನೆ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್, ಉಪಾಧ್ಯಕ್ಷ ಮಹಮ್ಮದ್ ಮುಸ್ತಫಾ ಮಲಾರ್, ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ತಾಲೂಕು ಪಂಚಾಯಿತಿ ಸದಸ್ಯ ಜಬ್ಬಾರ್ ಬೋಳಿಯಾರು, ಕಾಂಗ್ರೆಸ್ ಉಳ್ಳಾಲ ನಗರ ಆಧ್ಯಕ್ಷ ಬಾಜಿಲ್ ಡಿಸೋಜ, ಮುಖಂಡ ಪಿ. ಎಂ. ಕುಂಞ, ಯುವ ಕಾಂಗ್ರೆಸ್ ಕ್ಷೇತ್ರ ಅಧ್ಯಕ್ಷ ರವೂಫ್, ಇಕ್ಬಾಲ್ ಸಾಮಣಿಗೆ, ಎನ್‌ಎಸ್‌ಯುಐ ಸದಸ್ಯ ಗುರುದತ್ ಮಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News