×
Ad

ವಾಣಿಜ್ಯ ತೆರಿಗೆ ಅಧಿಕಾರಿ ಮನೆಯಲ್ಲಿ ಕಳ್ಳತನ

Update: 2017-11-04 22:17 IST

ಮೈಸೂರು, ನ.4: ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಮನೆಯಲ್ಲಿ ಕಳ್ಳತನ ನಡೆದ ಘಟನೆ ಸರ್ದಾರ್ ವಲ್ಲಭ ಭಾಯಿ ಪಟೇಲ್ ನಗರದಲ್ಲಿ ನಡೆದಿದೆ.

ಸರ್ದಾರ್ ವಲ್ಲಭ ಭಾಯಿ ಪಟೇಲ್ ನಗರದಲ್ಲಿರುವ  ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹೇಶ್ ಎಂಬವರಿಗೆ ಸೇರಿದ ಮನೆ ನಿರ್ಮಾಣ ಹಂತದಲ್ಲಿತ್ತು. ಮನೆ ನಿರ್ಮಾಣಕ್ಕೆ ಬಳಸಲಾಗುವ ಕಬ್ಬಿಣ, ಮರಗಳು ಸೇರಿದಂತೆ ಲಕ್ಷಾಂತರ ಮೌಲ್ಯದ ಪದಾರ್ಥಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ವಾಚ್ ಮನ್ ಇಲ್ಲದ ವೇಳೆ ಕಳ್ಳರು. ಕೈಚಳಕ ತೋರಿಸಿದ್ದಾರೆ. 

ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News