×
Ad

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ 4 ವರ್ಷ ಜೈಲು ಕಠಿಣ ಶಿಕ್ಷೆ

Update: 2017-11-05 17:32 IST

ಶಿವಮೊಗ್ಗ, ನ. 5: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದವನಿಗೆ 4 ವರ್ಷ ಕಠಿಣ ಸಜೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ 1 ನೇ ಹೆಚ್ಚುವರಿ ವಿಶೇಷ (ಪೋಕ್ಸೋ) ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶುಭಾಗೌಡರ್ ಆದೇಶ ಹೊರಡಿಸಿದ್ದಾರೆ. 

ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್.ನಗರದ ನಿವಾಸಿ ಅನೀಸ್ ಅಹ್ಮದ್ ಶಿಕ್ಷೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. 2015 ನೇ ಜುಲೈ 24 ರಂದು ಅನೀಸ್ ಅಹ್ಮದ್‍ನು ಮನೆಯೊಂದಕ್ಕೆ ನುಗ್ಗಿ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ಮೇಲೆ ಅತ್ಯಾಚಾರಕ್ಕೆ ವಿಫಲ ಯತ್ನ ನಡೆಸಿದ್ದನು. 

ಈ ಕುರಿತಂತೆ ಬಾಲಕಿಯ ಪೋಷಕರು ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಆಧಾರದ ಮೇಲೆ ಫೋಕ್ಸೋ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಿಕೊಂಡ ಪೊಲೀಸರು ಅನೀಸ್ ಅಹ್ಮದ್‍ನನ್ನು ಬಂಧಿಸಿದ್ದರು. ಈತನ ವಿರುದ್ದ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಕೂಡ ಸಲ್ಲಿಸಿದ್ದರು. ನ್ಯಾಯಾಲಯದ ವಿಚಾರಣೆಯಲ್ಲಿ ಅನೀಸ್ ಅಹ್ಮದ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಕಠಿಣ ಶಿಕ್ಷೆ - ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಸ್.ಕೆ.ಮೂರ್ತಿರಾವ್ ವಾದಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News