ಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರತಿಭೋತ್ಸವ ಘೋಷಣಾ ಸಮಾವೇಶ
Update: 2017-11-05 19:25 IST
ಬಂಟ್ವಾಳ, ನ. 5: ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಪ್ರತಿಭೋತ್ಸವ ಘೋಷಣಾ ಸಮಾವೇಶವು ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನರವರ ಅಧ್ಯಕ್ಷತೆಯಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕಚೇರಿ ಬಿ.ಸಿ ರೋಡ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರತಿಭೋತ್ಸವ ಕೈಪಿಡಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಜಿಲ್ಲಾ ಉಪಾಧ್ಯಕ್ಷರುಗಳಾದ ಇಬ್ರಾಹಿಂ ಸಖಾಫಿ ಸೆರ್ಕಳ, ಕೆ.ಎಂ.ಎಚ್ ಝುಹ್ರಿ ಕೊಂಬಾಳಿ, ಜಿಲ್ಲಾ ಕಾರ್ಯದರ್ಶಿಗಳಾದ ಶರೀಫ್ ನಂದಾವರ, ಮಹಮ್ಮದಲಿ ತುರ್ಕಳಿಕೆ ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯದರ್ಶಿ ಸ್ವಾಗತಿಸಿ, ಕೊನೆಗೆ ವಂದಿಸಿದರು.