ಗಡಿ ನುಸುಳಲು ಯತ್ನ: ಇಬ್ಬರು ಉಗ್ರರ ಹತ್ಯೆ
Update: 2017-11-05 21:50 IST
ಶ್ರೀನಗರ, ನ. 5: ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದ ಗಡಿ ನಿಯಂತ್ರಣಾ ರೇಖೆ ಸಮೀಪ ರವಿವಾರ ಒಳನುಸುಳಲು ಪ್ರಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆಗೈದಿದೆ.
ಇದರಿಂದ ಸಂಭವಿಸಬಹುದಾಗಿದ್ದ ದುರಂತವೊಂದು ತಪ್ಪಿದೆ ಎಂದು ಡಿಜಿಪಿ ಎಸ್.ಪಿ. ವೈದ್ಯ ತಿಳಿಸಿದ್ದಾರೆ.
ದುಲಂಜಾ ಉರಿಯಲ್ಲಿ ಗಡಿ ನುಸುಳುವ ಪಾಕಿಸ್ತಾನದ ಗಡಿ ಕ್ರಿಯಾ ತಂಡದ ಪ್ರಯತ್ನವನ್ನು ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸ್ ವಿಫಲಗೊಳಿಸಿದೆ. ಅಲ್ಲದೆ ಇಬ್ಬರು ಉಗ್ರರನ್ನು ಹತ್ಯೆಗೈದಿದೆ. ಯೋಧರಿಗೆ ಯಾವುದೇ ಗಾಯಗಳಾಗಿಲ್ಲ. ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದಂತಾಗಿದೆ ಎಂದು ಡಿಜಿಪಿ ಎಸ್.ಪಿ. ವೈದ್ಯ ಟ್ವಿಟರ್‌ನಲ್ಲಿ ಬರೆದಿದ್ದಾರೆ.