×
Ad

ನ.6: ಉಡುಪಿಗೆ ವೇಣುಗೋಪಾಲ್, ಡಾ.ಪರಮೇಶ್ವರ್

Update: 2017-11-05 22:23 IST

ಉಡುಪಿ, ನ.5: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೇಂದ್ರ ಚುನಾವಣಾ ಸಮಿತಿ ಉಸ್ತುವಾರಿ ಆಸ್ಕ್ಕರ್ ಫೆರ್ನಾಂಡೀಸ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಸೇರಿದಂತೆ ಅನೇಕ ಹಿರಿಯ ನಾಯಕರು  ನ.6 ರಂದು ನಡೆಯುವ ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್, ಕೆಪಿಸಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಜಿ ಎ ಬಾವ, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ರಾಜ್ಯ ಪ್ರದೇಶ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ನಿಗಮ ಮಂಡಲಿ ಅಧ್ಯಕ್ಷರುಗಳು ನಾಳೆ ಅಪರಾಹ್ನ 2:30ಕ್ಕೆ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯ ಇಂನಸಚಿವಡಿ.ಕೆ.ಶಿವಕುಮಾರ್,ಎಐಸಿಸಿಕಾರ್ಯದರ್ಶಿವಿಷ್ಣುನಾಥ್,ಕೆಪಿಸಿಸಿಉಡುಪಿಜಿಲ್ಲಾಉಸ್ತುವಾರಿಜಿಎಬಾವ,ಜಿಲ್ಲಾಉಸ್ತುವಾರಿಸಚಿವಪ್ರಮೋದ್‌ಮ್ವರಾಜ್, ರಾಜ್ಯ ಪ್ರದೇಶ್ ಕಾಂಗ್ರೆಸ್ ಪ್ರಾನಕಾರ್ಯದರ್ಶಿಗಳು,ಕಾರ್ಯದರ್ಶಿಗಳುಹಾಗೂನಿಗಮಮಂಡಲಿಅ್ಯಕ್ಷರುಗಳು ನಾಳೆ ಅಪರಾಹ್ನ 2:30ಕ್ಕೆ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ವನದಲ್ಲಿನಡೆಯುವಸೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾ ಕಾಂಗ್ರೆಸ್ ಸರ್ವ ಸದಸ್ಯರ ಸಭೆ ನಡೆಯಲಿದೆ. ನಾಳೆ ಅಪರಾಹ್ನ ಒಂದು ಗಂಟೆಗೆ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ಸಂಜೆ 5:00ಕ್ಕೆ ಕಾರ್ಕಳ ವಿಧಾನಸಭಾ ವ್ಯಾಪ್ತಿಯಲ್ಲಿ ಮನೆ ಮನೆಗೆ ಕಾಂಗ್ರೆಸ್ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್‌ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತೋನ್ಸೆ ಅಧಿಕಾರ ಸ್ವೀಕಾರ:    ಇದೇ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜನಾರ್ಧನ ತೋನ್ಸೆ ಅವರು ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News