ಕಂಬಳಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ
Update: 2017-11-06 16:37 IST
ಹೊಸದಿಲ್ಲಿ, ನ.6: ಕಂಬಳಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಕಂಬಳ ಕ್ರೀಡೆಗೆ ತಡೆಯಾಜ್ಞೆ ನೀಡುವಂತೆ ಪೆಟಾ(ಪಿಇಟಿಎ) ಸಂಘಟನೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಕಂಬಳಕ್ಕೆ ತಡೆಯಾಜ್ಞೆ ನೀಡುವ ಮನವಿಯನ್ನು ತಿರಸ್ಕರಿಸಿದೆ. ಮುಂದಿನ ವಿಚಾರಣೆಯನ್ನು ನ.13ಕ್ಕೆ ನಿಗದಿಪಡಿಸಿದೆ.
ಈ ಸಂಬಂಧ ಕೇಂದ್ರ ಸರಕಾರ, ಕರ್ನಾಟಕ ಸರಕಾರಕ್ಕೆ ನೋಟಿಸು ನೀಡಿದ್ದು , ಮುಂದಿನ ವಿಚಾರಣೆಗೆ ಹಾಜರಾಗುವಂತೆ ಅಟಾರ್ನಿ ಜನರಲ್ ಗೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಸೂಚಿಸಿದೆ.