ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ
Update: 2017-11-06 18:38 IST
ಕಂಕೇರ್, ನ. 6: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆಯ ಯೋಧನೋರ್ವ ಗುಂಡು ಹಾರಿಸಿಕೊಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.
ಗಡಿ ಭದ್ರತಾ ಪಡೆಯ 114ನೆ ಬೆಟಾಲಿಯನ್‌ನ ಕಾನ್‌ಸ್ಟೆಬಲ್ ಪವಾರ್ ಪ್ರಸಾದ್ ದಿನಕರ್ ಪಖಂಜೋರ್ ಕ್ಯಾಂಪ್‌ನಲ್ಲಿ ರವಿವಾರ ರಾತ್ರಿ ತನ್ನ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.