ಅಸೈಗೋಳಿ: ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಕೆ.ವೇಣುಗೋಪಾಲ್
ಮುಡಿಪು, ನ. 6: ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಅಂಗವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್‌ನ ಕರ್ನಾಟಕ ರಾಜ್ಯ ಉಸ್ತುವಾರಿ ಕೆ.ವೇಣುಗೋಪಾಲ್ ಅವರು ಸೋಮವಾರ ದೇರಳಕಟ್ಟೆಯಿಂದ ಕಾರ್ಯಕರ್ತರೊಂದಿಗೆ ಬೈಕ್ ರ್ಯಾಲಿಯ ಮೂಲಕ ಆಗಮಿಸಿ ಅಸೈಗೋಳಿಯಲ್ಲಿ ನಡೆದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ದೇರಳಕಟ್ಟೆಯಲ್ಲಿ ಕೆ.ವೇಣುಗೋಪಾಲ್ ಅವರನ್ನು ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್‌ನ ಕಾರ್ಯಕರ್ತರು ಸ್ವಾಗತಿಸಿ ಬಳಿಕ ದೇರಳಕಟ್ಟೆಯಿಂದ ಅಸೈಗೋಳಿಯವರೆಗೆ ಬೈಕ್ ರ್ಯಾಲಿ ನಡೆಸಿದರು. ಅಸೈಗೋಳಿಯಲ್ಲಿ ಉಳ್ಳಾಲ ಹಾಗೂ ಮುಡಿಪು ಬ್ಲಾಕ್ ಕಾಂಗ್ರೆಸ್‌ನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟಿ ನೀಡಿ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮಕ್ಕೆ ಕಾರ್ಯಕರ್ತರಲ್ಲಿ ಹುರುಪು ಮೂಡಿಸಿದರು.
ಕಾರ್ಯಕ್ರಮದಲ್ಲಿ ಆಹಾರ ಸಚಿವ ಯು.ಟಿ.ಖಾದರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್, ಐವನ್ ಡಿಸೋಜ, ವಿಷ್ಣುನಾಥನ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ಪ್ರಶಾಂತ್ ಕಾಜವ, ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಬಂಟ್ವಾಳ ತಾಲೂಕು ಪಂ. ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜಿಲ್ಲಾ ಪಂ. ಸದಸ್ಯರಾದ ಮಮತಾ ಗಟ್ಟಿ, ರಶೀದಾ ಬಾನು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಟಿ.ಎಸ್.ಅಬ್ದುಲ್ಲಾ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಹಮ್ಮದ್ ಮುಸ್ತಫಾ ಹರೇಕಳ, ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೋಡಿಜಾಲ್, ಸದಾಶಿವ ಉಳ್ಳಾಲ್, ಮುಡಿಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಉಳ್ಳಾಲ ಯುವ ಕಾಂಗ್ರೆಸ್‌ನ ರವೂಫ್, ಕಾಂಗ್ರೆಸ್ ಮುಖಂಡರಾದ ಕಣಚೂರು ಮೋನು, ಪಿ.ಎಂ.ಕುಂಞಿ, ಸುರೇಶ್ ಭಟ್ನಗರ, ಕೊಣಾಜೆ ಪಂ. ಅಧ್ಯಕ್ಷ ಶೌಕತ್ ಆಲಿ, ಇರಾ ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಯುವ ಕಾಂಗ್ರೆಸ್‌ನ ನಾಸೀರ್ ಸಾಮಣಿಗೆ, ತಾಲೂಕು ಪಂ. ಸದಸ್ಯೆ ಪದ್ಮಾವತಿ ಪೂಜಾರಿ, ಮಾಜಿ ಜಿಲ್ಲಾ ಪಂ. ಸದಸ್ಯ ಎನ್.ಎಸ್.ಕರೀಂ, ಉಮ್ಮರ್ ಪಜೀರ್,ಜಬ್ಬಾರ್ ಬೋಳಿಯಾರ್, ದೇವಕಿ ಪೂಜಾರಿ, ನಝರ್ ಷಾ ಪಟ್ಟೋರಿ, ಸಿರಾಜ್ ಕಿನ್ಯ ಮೊದಲಾದವರು ಉಪಸ್ಥಿತರಿದ್ದರು.