ಸುದ್ದಿ ವಾಹಿನಿಯ ವರದಿಗಾರ ಆತ್ಮಹತ್ಯೆ
Update: 2017-11-06 19:41 IST
ಕೋಝಿಕೋಡ್, ನ. 6: ಮಲಯಾಳಂ ಸುದ್ದಿ ವಾಹಿನಿಯ ವರದಿಗಾರನೋರ್ವ ಇಲ್ಲಿನ ಅಪಾರ್ಟ್‌ಮೆಂಟ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಚ್ಚಿ ಜಿಲ್ಲೆಯ ತೋಪುಂಬಾಡಿ ನಿವಾಸಿ ನಿತಿನ್ ದಾಸ್ (26) ಅವರ ಮೃತದೇಹ ಅಪಾರ್ಟ್‌ಮೆಂಟ್‌ನ ಕೊಠಡಿ ಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಾಹಿತಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಇದು ವೈಯಕ್ತಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಂದು ಪೊಲೀಸರು ಶಂಕಿಸಿದ್ದಾರೆ.