×
Ad

‘ಅನಿತಾಕೌಲ್’ ಉತ್ತಮ ಶಿಕ್ಷಕ ಪ್ರಶಸ್ತಿಗೆ ಐದು ಮಂದಿ ಆಯ್ಕೆ

Update: 2017-11-06 20:09 IST

ಬೆಂಗಳೂರು, ನ. 6: ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಐಎಎಸ್ ಅಧಿಕಾರಿ ಅನಿತಾಕೌಲ್ ಅವರ ನೆನಪಿನಲ್ಲಿ ಕರ್ನಾಟಕ ಜ್ಞಾನ-ವಿಜ್ಞಾನ ಸಮಿತಿ ನೀಡುವ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಐದು ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದಿನೇಶ್ ಶೆಟ್ಟಿಗಾರ್, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕಟಗೇರಿ ಮಾಧ್ಯಮಿಕ ಶಾಲೆಯ ಶಿಕ್ಷಕ ಎಚ್.ಜಿ.ಹುದ್ದಾರ, ಮೈಸೂರು ಜಿಲ್ಲೆ ಕೆಆರ್ ನಗರ ತಾಲೂಕಿನ ಕಂಚುಗಾರ ಕೊಪ್ಪಲು ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ವಿಷ್ಣುಶೆಟ್ಟಿ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜೋಗಿಸರ ಪ್ರಾಥಮಿಕ ಶಾಲೆಯ ಎಚ್.ಎಂ.ಗಂಗಾ ಹಾಗೂ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕೋರವಾರ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ಲೀಲಾವತಿ ಬಿ.ಕುಲಕರ್ಣಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಯನ್ನು ನ.12ರ ರವಿವಾರ ಬೆಳಗ್ಗೆ 11ಕ್ಕೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುವ ರಾಜ್ಯಮಟ್ಟದ ಶೈಕ್ಷಣಿಕ ವಿಚಾರ ಸಂಕಿರಣದಲ್ಲಿ ಪುರಸ್ಕೃತರಿಗೆ 'ಅನಿತಾಕೌಲ್ ಪ್ರಶಸ್ತಿ' ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಕಾರ್ಯದರ್ಶಿ ಇ.ಬಸವರಾಜು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News