×
Ad

ಗಾಂಜಾ ಸೇವನೆ ಆರೋಪ: ಇಬ್ಬರು ವಶ

Update: 2017-11-06 22:18 IST

ಮಂಗಳೂರು, ನ. 6: ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಬರ್ಕೆ ಠಾಣಾ ಪೊಲೀಸರು ಸೋಮವಾರ ಇಬ್ಬರನ್ನು ಬಂಧಿಸಿದ್ದಾರೆ.

ನಗರದ ಕುದ್ರೋಳಿ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಕುಶಾಲಪ್ಪ ಬಿ.ಕೆ. ಯಾನೆ ಕವನ್ ಮತ್ತು ಇಂದ್ರಜಿತ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬರ್ಕೆ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಠಾಣಾ ಸರಹದ್ದಿನಲ್ಲಿ ರೌಂಡ್ಸ್ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಕಲಂ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News