ಬ್ಯಾರೀಸ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿ: ವಿಜೇತರಿಗೆ ಬಹುಮಾನ ವಿತರಣೆ
ಮಂಗಳೂರು, ನ. 6: ಬ್ಯಾರೀಸ್ ಸ್ಪೋರ್ಟ್ಸ್ ಪ್ರೊಮೋಟರ್ಸ್ ಮತ್ತು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಬ್ಯಾರೀಸ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ವಿಜೇರಿಗೆ ಬಹುಮಾನ ವಿತರಣೆ ಕಾರ್ಯಕ್ರಮವು ನಗರದ ಖಾಸಗಿ ಹೊಟೇಲ್‌ನಲ್ಲಿ ಸೋಮವಾರ ನಡೆಯಿತು.
ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಾಸಕ ಬಿ.ಎ.ಮೊಯ್ದಿನ್ ಬಾವ, ಶ್ರೀದೇವಿ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಸದಾನಂದ ಶೆಟ್ಟಿ, ವೈಎಂಸಿ ಮಂಗಳೂರು ಇದರ ಹಿರಿಯ ಪ್ರೊಫೆಸರ್ ಡಾ. ಅಬ್ದುಲ್ ಮಜೀದ್, ಲೆಕ್ಕ ಪರಿಶೋಧಕ ಶ್ರೀನಿವಾಸ ಎಸ್.ಕಾಮತ್, ಬ್ಯಾರೀಸ್ ಸ್ಪೋರ್ಟ್ಸ್ ಪ್ರೊಮೋಟರ್ಸ್‌ನ ಅಧ್ಯಕ್ಷ ನೂರ್ ಮುಹಮ್ಮದ್, ಮುಹಮ್ಮದ್ ನಿಸಾರ್ ಮೊದಲಾದವರು ಉಪಸ್ಥಿತರಿದ್ದರು.
ಇಬ್ಬರು ಕ್ರೀಡಾಪಟುಗಳಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಲಾಂಗ್ ಜಂಪ್‌ನಲ್ಲಿ ರಾಷ್ಟೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದಿರುವ ಸಂಶೀರ್ ಮತ್ತು ಕಬಡ್ಡಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಅಕ್ರಮ್ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.