ಶಿಕ್ಷಕರ ಪ್ರತಿಭೆ ಪ್ರದರ್ಶನಕ್ಕೆ ಸಹಪಠ್ಯ ಚಟುವಟಿಕೆ ಉತ್ತಮ ವೇದಿಕೆ: ವೆಂಕಟರಾಮು
ಚಿಕ್ಕಮಗಳೂರು, ನ.7: ಶಿಕ್ಷಕರ ಪ್ರತಿಭೆ ಪ್ರದರ್ಶನಕ್ಕೆ ಸಹಪಠ್ಯ ಚಟುವಟಿಕೆ ಒಂದು ಉತ್ತಮ ವೇದಿಕೆಯಾಗಿದ್ದು, ಇದರ ಸದ್ಬಳಕೆಯಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು ಹೇಳಿದ್ದಾರೆ.
ಮಂಗಳವಾರ ನಗರದ ಬೇಲೂರು ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಪೂರ್ವ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆ ಉದ್ಘಾಟಿಸಿ ಮಾತನಾಡಿದ ಅವರು,
ತಾಲೂಕು ಮಟ್ಟದಲ್ಲಿ ವಿಜೇತರಾದವರಿಗೆ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿರುವ ಅವಕಾಶವಿದೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ದೇಶದ ಅತ್ಯುತ್ತಮ ಶಿಕ್ಷಕರಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ-ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು/ಜಿಲ್ಲಾ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಕಾರ್ಯಕ್ರಮವನ್ನು ಮಹೇಶ್ ನಿರ್ವಹಿಸಿದರು. ಶಿಕ್ಷಣ ಸಂಯೋಜಕ ಕರಿಸಿದ್ದಯ್ಯ ಸ್ವಾಗತಿಸಿದರು. ಧರ್ಮೇಗೌಡ ವಂದಿಸಿದರು.