×
Ad

ಮಾದಕ ವಸ್ತು ಮಾರಾಟ: ಆರೋಪಿಯ ಬಂಧನ

Update: 2017-11-07 19:25 IST

ಬೆಂಗಳೂರು, ನ.7: ಮಾದಕ ವಸ್ತು ಗಾಂಜಾ ಮಾರಾಟ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮುಂಬೈನ ವಿಜಯನ್ ವಿಕ್ರಯನ್ ನಾಯರ್(28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್‌ಎಎಲ್ 2ನೆ ಹಂತ, ಡಬಲ್ ರೋಡ್ 11ನೆ ಮುಖ್ಯರಸ್ತೆಯಲ್ಲಿ ಮಾದಕ ವಸ್ತು ಗಾಂಜಾ ಇಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಎನ್ನಲಾಗಿದೆ.

ಕೂಡಲೇ ಸಿಸಿಬಿ ಪೊಲೀಸರು ದಾಳಿ ನಡೆಸಿ ಈತನನ್ನು ಬಂಧಿಸಿ ಆತನ ಬಳಿ ಇದ್ದ ಸುಮಾರು 90 ಸುಮಾರು ಬೆಲೆಯ 1.2 ಗಾಂಜಾ, ಮೊಬೈಲ್ ಹಾಗೂ ಬೈಕ್ ವಶಕ್ಕೆ ಪಡೆದು ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News