ನ.9ಕ್ಕೆ ಸಚಿವ ಸಂಪುಟ ಸಭೆ
Update: 2017-11-07 20:10 IST
ಬೆಂಗಳೂರು, ನ. 7: ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಮಸೂದೆ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡನೆ ಸೇರಿದಂತೆ ಇನ್ನಿತರ ಮಹತ್ವದ ವಿಷಯಗಳ ಚರ್ಚೆ ಹಿನ್ನೆಲೆಯಲ್ಲಿ ನ.9ರ ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ.
ಲಂಬಾಣಿ ತಾಂಡಾ, ಗೊಲ್ಲರಹಟ್ಟಿ ಸೇರಿ ದಾಖಲೆ ರಹಿತ ಗ್ರಾಮಗಳಿಗೆ ಮಾನ್ಯತೆ ನೀಡುವ ಭೂ ಕಂದಾಯ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದು, ಅನುಷ್ಟಾನ ಹಾಗೂ ವಿದ್ಯುತ್ ಖರೀದಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಸದನ ಸಮಿತಿಯ ವರದಿ ಮಂಡನೆ ಸಂಬಂಧ ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಮೂರನೆ ಮಹಡಿಯಲ್ಲಿ ಸಚಿವ ಸಂಪುಟ ಸಭಾ ಮಂದಿರದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.