×
Ad

ಎಪ್ರಿಲ್ 18ರಿಂದ ‘ಸಿಇಟಿ-2018’ ಪರೀಕ್ಷೆ

Update: 2017-11-07 20:11 IST

ಬೆಂಗಳೂರು, ನ. 7: 2018-19ನೆ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) 2018ನೆ ಎಪ್ರಿಲ್ 18, 19 ಮತ್ತು 20ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಇಂಜಿನಿಯರಿಂಗ್, ತಂತ್ರಜ್ಞಾನ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಅಭ್ಯರ್ಥಿಗಳು ಸಿಬಿಎಸ್‌ಸಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ(ನೀಟ್)ಗೆ ಹಾಜರಾಗಬೇಕು.

ಆರ್ಕಿಟೆಕ್ಟರ್ ಕೋರ್ಸ್ ಪ್ರವೇಶಕ್ಕಾಗಿ ಅಭ್ಯರ್ಥಿಗಳು ಜೆಇಇ-ಪೇಪರ್-2 ಅಥವಾ ಕೌನ್ಸಿಲ್ ಆಫ್ ಆರ್ಕಿಟೆಕ್ಟರ್ ನಡೆಸುವ ಎನ್‌ಎಟಿಎ ಪರೀಕ್ಷೆಗೆ ಹಾಜರಾಗಬೇಕು. ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kpsc.kar.nic.in ಗೆ ಭೇಟಿ ನೀಡಲು ಕೋರಲಾಗಿದೆ.

ವೇಳಾಪಟ್ಟಿ: ಎಪ್ರಿಲ್-18ರ ಬೆಳಗ್ಗೆ 10:30ರಿಂದ 11:50ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2:30ರಿಂದ 3:50ರ ವರೆಗೆ ಗಣಿತ, ಎಪ್ರಿಲ್-19ರ ಬೆಳಗ್ಗೆ 10:30ರಿಂದ ಮಧ್ಯಾಹ್ನ 11:50ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30ರಿಂದ 3:50ರ ವರೆಗೆ ರಸಾಯನಶಾಸ್ತ್ರ. ಎ.20ರ ಬೆಳಗ್ಗೆ 11:30ರಿಂದ ಮಧ್ಯಾಹ್ನ 12:30ರ ವರೆಗೆ ಕನ್ನಡ ಭಾಷಾ ಪರೀಕ್ಷೆ (ಬೆಂಗಳೂರು ಕೇಂದ್ರದಲ್ಲಿ ಮಾತ್ರ) ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News