×
Ad

ಧರ್ಮಸ್ಥಳ ಗ್ರಾಮಾಭಿವೃದಿ ಯೋಜನೆ ಹೆಬಳೆ ಒಕ್ಕೂಟ ಉದ್ಘಾಟನೆ

Update: 2017-11-07 20:14 IST

ಭಟ್ಕಳ, ನ. 7: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದಿ ಯೋಜನೆ ಹೆಬಳೆ ಇದರ ಒಕ್ಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಭಟ್ಕಳ ನಗರ ಠಾಣೆಯ ಸಬ್ ಇನ್ಸಪೆಕ್ಟರ್ ಬಸವರಾಜ್ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಸ್ವ ಸಹಾಯ ಸಂಘಗಳ ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರೂ ಸಹ ಸಬಲೀಕರಣದತ್ತ ಹೆಜ್ಜೆ ಹಾಕುವುದರೊಂದಿಗೆ ಸ್ವಾವಲಂಬಿಗಳಾಗಲು ಸಹಕಾರಿಯಾಯಿತು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವೆಂಕಟೇಶ್ವರ ನಾಮಧಾರಿ ವಿದ್ಯಾವರ್ಧಕ ಸಂಘ ಜಾಲಿಯ ಅಧ್ಯಕ್ಷ ಮಾದೇವ ಡಿ. ನಾಯ್ಕ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಸ್ವ ಸಹಾಯ ಸಂಘಗಳು ಸ್ಥಾಪನೆಯಾದ ನಂತರ ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸಭಲರಾಗುವುದರೊಂದಿಗೆ ತಮ್ಮ ಬದುಕನ್ನು ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

 ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಹೊನ್ನಾವರ/ಭಟ್ಕಳ ಯೋಜನಾಧಿಕಾರಿ ಎಂ.ಎಸ್. ಈಶ್ವರ ಹೊಸದಾಗಿ ಆಯ್ಕೆಯಾದ ಐದು ಒಕ್ಕೂಟಗಳ ಪದಾಧಿಕಾರಿಗಳಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಯೋಜನೆ ಹಾಗೂ ಪದಗ್ರಹಣದ ಮಹತ್ವವನ್ನು ತಿಳಿಸುತ್ತಾ ಈ ಹಿಂದಿನ ಒಕ್ಕೂಟದ ಕಾರ್ಯವನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಜಾಲಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಲಕ್ಷ್ಮೀ ಮಾದೇವ ನಾಯ್ಕ, ಪಟ್ಟಣ ಪಂಚಾಯತ್ ಸದಸ್ಯ ಪುರಂದರ ಕೆ. ಮೊಗೇರ, ಗಣಪಯ್ಯ ಕೆ. ಗೊಂಡ, ಜಾಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸುಲೇಮಾನ್ ಕೆ., ಪ್ರಮುಖರಾದ ನಾಗೇಶ ನಾರಾಯಣ ಮೊಗೇರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News