ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಮೇರಿ ಕೋಮ್‌ಗೆ ಚಿನ್ನ

Update: 2017-11-08 08:46 GMT

   ಹೋ ಚಿ ಮಿನ್ ಸಿಟಿ(ವಿಯೆಟ್ನಾಂ), ನ.8: ಐದು ಬಾರಿ ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದುಕೊಂಡಿದ್ದ ಭಾರತದ ಖ್ಯಾತ ಮಹಿಳಾ ಬಾಕ್ಸರ್ ಎಂ.ಸಿ.ಮೇರಿ ಕೋಮ್ ಬುಧವಾರ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ 48 ಕೆ.ಜಿ ವಿಭಾಗದ ಫೈನಲ್‌ನಲ್ಲಿ ಚಿನ್ನ ಗೆದ್ದುಕೊಂಡರು.

ವಿಯೆಟ್ನಾಂನಲ್ಲಿ ನಡೆದ  ಫೈನಲ್‌ನಲ್ಲಿ ಮೇರಿ ಕೋಮ್ ಅವರು ಕೊರಿಯಾದ ಕಿಮ್ ಹ್ಯಾಂಗ್ ಮಿ ವಿರುದ್ಧ ಜಯ ಗಳಿಸಿ 48 ಕೆ.ಜಿ. ವಿಭಾಗದಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳಾ ಬಾಕ್ಸರ್ ಎಂಬ ಖ್ಯಾತಿಗೆ ಪಾತ್ರರಾದರು.

 ಮೇರಿ ಕೋಮ್ ಅವರು ಜಪಾನ್‌ನ ಸಬಾಸಾ ಕೊಮುರಾ ವಿರುದ್ಧ 5-0 ಅಂತರದಲ್ಲಿ ಜಯ ಗಳಿಸಿ ಐದನೆ ಬಾರಿ ಫೈನಲ್ ತಲುಪಿದ್ದರು. ಅವರು 6ನೆ ಬಾರಿ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದರು..

35ರ ಹರೆಯದ ರಾಜ್ಯಸಭಾ ಸದಸ್ಯೆ ಮೇರಿ ಕೋಮ್ ಅವರು 2012ರಲ್ಲಿ 51 ಕೆ.ಜಿ.ವಿಭಾಗದಲ್ಲಿ ಸ್ಪರ್ಧಿಸಿ ಒಲಿಂಪಿಕ್ಸ್‌ನಲ್ಲಿ ಕಂಚು ಜಯಿಸಿದ್ದರು. ಮೇರಿ ಕೋಮ್ ಐದು ವರ್ಷಗಳ ಬಳಿಕ 48 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News