ಗಾಂಜಾ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
Update: 2017-11-08 23:26 IST
ಮಂಗಳೂರು, ನ. 8: ವಾಮಂಜೂರು ಬಸ್ ತಂಗುದಾಣದ ಸಮೀಪ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರೆನ್ನಲಾದ ಇಬ್ಬರನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕುಂಜತ್‌ಬೈಲ್ ದೇವಿನಗರದ ನಿವಾಸಿ ದೀಪಕ್ (23) ಕುಂಜತ್‌ಬೈಲ್‌ನ ಪ್ರಜ್ವಲ್ (20 ) ಎಂದು ಗುರುತಿಸಲಾಗಿದೆ.
ಗ್ರಾಮಾಂತರ ಠಾಣೆಯ ಪೊಲೀಸ್ ನಿರೀಕ್ಷಕರು ಖಚಿತ ವರ್ತಮಾನದ ಮೇರೆಗೆ ಆರೋಪಿಗಳನ್ನು ದಸ್ತಗಿರಿ ಮಾಡಿ ಆರೋಪಿಗಳ ವಶದಲ್ಲಿದ್ದ ಸುಮಾರು 35 ಗ್ರಾಂ ಗಾಂಜಾ ಹಾಗೂ ಆರೋಪಿಗಳ ಬಳಿ ಇದ್ದ ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.